ಪಾದರಕ್ಷೆ/ಶೂ/ಚರ್ಮ ವಸ್ತುಗಳ ತಯಾರಿಕೆಯಲ್ಲಿ ಕೌಶಲ್ಯ ಅಭಿವೃದ್ಧಿಗೊಳಿಸುವುದು ಮತ್ತು ಗುಡಿ ಕೈಗಾರಿಕೆಗೆ ಉತ್ತೇಜನ ನೀಡುವುದು ಈ ಯೋಜನೆಯ ಉದ್ದೇಶವಾಗಿರುತ್ತದೆ.
ಚರ್ಮ ಕುಶಲಕರ್ಮಿ ಕುಟುಂಬದ ಅಕ್ಷರಸ್ಥ ಯುವಕ/ ಯುವತಿಯರು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಲಾಗಿದೆ..
ಚರ್ಮೋದ್ಯೋಗದಲ್ಲಿ ತೊಡಗಿರುವ ಪರಿಶಿಷ್ಟ ಜಾತಿಯ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ ಮತ್ತಿತರೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿರುತ್ತದೆ.
ನಿಗಮದ ವಾಣಿಜ್ಯ ಚಟುವಟಿಕೆಗಳನ್ನು ಪುನಃಶ್ಚೇತನಗೊಳಿಸಿ ಲಾಭದಾಯಕ ಸಂಸ್ಥೆಯನ್ನಾಗಿ ಪರಿವರ್ತಿಸುವ ಉದ್ದೇಶ ಹೊಂದಲಾಗಿದೆ ಮತ್ತು ರಾಷ್ಟ ಮಟ್ಟದ ಚರ್ಮ ಕುಶಲಕರ್ಮಿಗಳ ಮೇಳ ಮತ್ತು ಮಾರಾಟ, ಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸಹಾಯ ಒದಗಿಸುವುದು.